ಚೆನ್ನೈ: ಮೇಕೆದಾಟು ಯೋಜನೆಯನ್ನು ನಾವು ಮಾಡಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಆದ್ರೆ ಈ ವಿಚಾರದಲ್ಲಿ ಸ್ವಪಕ್ಷದಲ್ಲೇ ವಿರೋಧಭಾಸ ವ್ಯಕ್ತವಾಗಿದೆ. ಕರ್ನಾಟಕ ಕೆಡರ್ ನ ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ಎಂದೇ ಹೆಸರಾಗಿದ್ದ ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಉಪವಾಸ ಸತ್ಯಾಗ್ರಹದ ಮೂಲಕ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಇದು ಬಿಜೆಪಿ ವರ್ಸಸ್ ಬಿಜೆಪಿ ಎನ್ನುವಂತಾಗಿದೆ.
ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ವಿರೋಧಿಸಿ ಕರ್ನಾಟಕದ ವಿರುದ್ಧ ಆಗಸ್ಟ್ 5ರಷ್ಟು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಇರಬಹುದು.. ಆದ್ರೆ ನಾವು ತಮಿಳುನಾಡು ಸರ್ಕಾರದ ಪರ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.
ಇದು ರಾಜ್ಯ ಬಿಜೆಪಿ ನಾಯಕರಿಗೆ ಇರಿಸುಮುರಿಸು ತಂದಿದೆ. ಆದರೂ ಎಂಎಲ್‍ಸಿ ತೇಜಸ್ವಿನಿ ಗೌಡ ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ವಿಚಾರ ಬಂದಾಗ ನಾವೆಲ್ಲಾ ಒಂದೇ, ಪ್ರಾದೇಶಿಕ ವಿಚಾರ ಬಂದಾಗ ಮಾತ್ರ ಬೇರೆ ಬೇರೆ ಎಂದಿದ್ದಾರೆ.
PublicNext
31/07/2021 09:19 am