ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ-ಬೊಮ್ಮಾಯಿ ಭೇಟಿ: ಅವಳಿನಗರಕ್ಕೆ ಏಮ್ಸ್ ಮಂಜೂರು ಮಾಡಲು ಬೇಡಿಕೆ

ನವದೆಹಲಿ: ಶುಕ್ರವಾರ ದೆಹಲಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚಿಸಿದ್ದಾರೆ

ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು.

Edited By : Nagaraj Tulugeri
PublicNext

PublicNext

31/07/2021 12:15 pm

Cinque Terre

98.05 K

Cinque Terre

2

ಸಂಬಂಧಿತ ಸುದ್ದಿ