ಬೆಂಗಳೂರು: “ಯತ್ನಾಳ್ ಅವರೇ ನಿಮ್ಮ ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು? ಜೆಡಿಎಸ್ ನಲ್ಲಿದ್ದಾಗ ಅಲ್ಪಸಂಖ್ಯಾತರ ಓಲೈಕೆ ಮಾಡಿಲ್ಲವೇ? ಹೀಗೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ ಬಾರಿ ಜೈಲಿಗೆ ಹೋದವರು. ಯಾರೋ ಒಬ್ಬರು ಮಾತಾಡಿದರೆ ಗೌರವ ಕಡಿಮೆಯಾಗುವುದಿಲ್ಲ. ಬಿಜೆಪಿಗೆ ಯಡಿಯೂರಪ್ಪ ಬಗ್ಗೆ ಅಪಾರ ಗೌರವ ಇದೆ ಎಂದರು.
PublicNext
31/07/2021 12:48 pm