ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
ಯಾದಗಿರಿ: ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಇಂದು ದೇವಾಪುರ ಹಾಗೂ ಶೆಳ್ಳಗಿ ಗ್ರಾಮಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆಹಾನಿ ಹಾಗೂ ಮನೆಗಳಿಗೆ ಹಾನಿಯಾದ ಪ್ರದೇಶಗಳಿಗೆ ಸುರಪುರ ಶಾಸಕ ರಾಜುಗೌಡ ಮತ್ತು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುರಪುರ ತಹಶೀಲ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಜುಗೌಡ ಅವರು, ಕೃಷ್ಣಾ ನದಿ ಪ್ರವಾಹದಿಂದ ಅತಿವೃಷ್ಟಿಯಾದ ಸ್ಥಳಕ್ಕೆ ಪಿಡಿಓ ಹಾಗೂ ಗ್ರಾಮ ಲೇಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಮಳೆಯಿಂದ ಮನೆ ಹಾನಿಯಾದ ಬಡ ಜನರಿಗೆ ಸೂಕ್ತ ಪರಿಹಾರ ಒದಗಿಸಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅಲ್ಲದೇ ಈ ಅತಿವೃಷ್ಟಿಯಲ್ಲಿ ಬಡವರ ಬಳಿ ಅಧಿಕಾರಿಗಳು ಲಂಚ ಪಡೆದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಜೊತೆಗೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಕಲಿಸಬೇಕಾಗುತ್ತದೆ ಎಂದು ಖಡಕ್ ಆಗಿ ಸೂಚನೆ ಕೊಟ್ರು.
ಈ ಸಂಧರ್ಭದಲ್ಲಿ ಜಿಪಂ ಸಿಇಓ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತ ಪ್ರಶಾಂತ್, ಡಿವೈಎಸ್ಪಿ ವೆಂಕಟೇಶ್ ಹೂಗಿಬಂಡಿ, ಸುರಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ಅಶೋಕ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
PublicNext
31/07/2021 09:29 pm