ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದ್ಯದಲ್ಲೇ ಗಡ್ಡಧಾರಿ ವ್ಯಕ್ತಿ ರಾಜ್ಯದ ಸಿಎಂ ಆಗ್ತಾರೆ: ಮೈಲಾರ ಭವಿಷ್ಯವಾಣಿ

ವಿಜಯನಗರ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರವೂ ಕಳೆದಿಲ್ಲ. ಇದೀಗ 'ಸಿಎಂ ಪಟ್ಟಕ್ಕೆ ಗಡ್ಡಧಾರಿ ವ್ಯಕ್ತಿ ಬರಲಿದ್ದಾರೆ' ಎಂಬ ಭವಿಷ್ಯ ಭಾರೀ ಕುತೂಹಲ ಮೂಡಿಸಿದೆ.

ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಆದರೆ ಅವರು 6-7 ತಿಂಗಳು ಮಾತ್ರ ರಾಜ್ಯಭಾರ ಮಾಡುತ್ತಾರೆ. 2022ರ ಮಾರ್ಚ್​ನಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.

ಮೈಲಾರ ವಾಣಿಯ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ ಪೂರ್ಣಗೊಳಿಸಲ್ಲ. ಮೈಲಾರಲಿಂಗೇಶ್ವರನ ಭವಿಷ್ಯವಾಣಿ ಎಂದೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಹಾಗಾಗಿ ಸಿಎಂ ಬದಲಾವಣೆ ಕುರಿತ ಈ ಮಾತು ಭಾರೀ ಸಂಚಲನ ಮೂಡಿಸಿದೆ. ಗಡ್ಡಧಾರಿ ವ್ಯಕ್ತಿ ಯಾರು? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

Edited By : Vijay Kumar
PublicNext

PublicNext

01/08/2021 03:46 pm

Cinque Terre

85.04 K

Cinque Terre

15

ಸಂಬಂಧಿತ ಸುದ್ದಿ