ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸಿಎಂ ಆಗ್ಬೇಕು ಅಂತ ಗಡ್ಡ ಬಿಟ್ಟಿಲ್ಲ': ಸಿ.ಟಿ ರವಿ

ಚಿಕ್ಕಮಗಳೂರು: 2022ರ ಮಾರ್ಚ್​ನಲ್ಲಿ ಗಡ್ಡಧಾರಿ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂಬ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನನಗೆ ಮೈಲಾರ ಭವಿಷ್ಯವಾಣಿ ಬಗ್ಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ರಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟು ಕೊಂಡು ಬಂದಿದ್ದೇನೆ. ಗಡ್ಡದಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ. ಬಹಳ ಜನ ಗಡ್ಡ ಬಿಡಬಹುದು. ಯಾರು ಯಾರು ಮುಖ್ಯಮಂತ್ರಿಯಾಗಬೇಕು ಅಂತ ಆಕಾಂಕ್ಷಿ ಇರ್ತಾರೋ ಅವರೆಲ್ಲಾ ಗಡ್ಡ ಬಿಡೋಕೆ ಪ್ರಾರಂಭಿಸಬಹುದು" ಎಂದು ಹೇಳಿದರು.

Edited By : Vijay Kumar
PublicNext

PublicNext

01/08/2021 03:58 pm

Cinque Terre

153.58 K

Cinque Terre

7

ಸಂಬಂಧಿತ ಸುದ್ದಿ