ಬೆಂಗಳೂರು: ಹೈಕಮಾಂಡ್‌ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಭಾನುವಾರ) ಸಂಜೆ ದಿಢೀರ್ ದೆಹಲಿಗೆ ತೆರಳಿದ್ದಾರೆ.
ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ನಾಳೆ (ಸೋಮವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಲಿದ್ದು, ಸಚಿವ ಸಂಪುಟಕ್ಕೆ ಅನುಮತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಬಸವರಾಜ ಬೊಮ್ಮಾಯಿ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ ಪಕ್ಷ ಹೈಕಮಾಂಡ್ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ. ಎಲ್ಲವೂ ಪಕ್ಷದ ಲೆಕ್ಕಾಚಾರದಂತೆ ನಡೆದರೆ ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆಯಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
PublicNext
01/08/2021 10:25 pm