ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಡುಗೊಲ್ಲರನ್ನು ಪ.ಪಂಗಡಕ್ಕೆ ಸೇರಿಸುವಂತೆ ಸಿಎಂ ಗೆ ಮನವಿ

ಚಿತ್ರದುರ್ಗ: ಮಧ್ಯ ಕರ್ನಾಟಕದಲ್ಲಿ ಅತಿ ಹೆಚ್ಚಾಗಿ ಕಂಡುಬರುವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕಾಡುಗೊಲ್ಲ ಮುಖಂಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿ ಅವರ ನಿವಾಸದಲ್ಲಿ ಭೇಟಿ ಮಾಡಿ ಬುಡಕಟ್ಟು ಕಾಡುಗೊಲ್ಲ ಸಮುದಾಯ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ದಶಕಗಳಿಂದ ಈ ಸಮುದಾಯ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದೆ. ಕಾಡುಗೊಲ್ಲರು ಮುಂದೆ ಬರಬೇಕೆಂದರೆ ಈ ಸಮುದಾಯಕ್ಕೆ ಮೀಸಲಾತಿ ಅವಶ್ಯಕತೆ ಇದೆ. ಆಗಾಗಿ ಸಮುದಾಯದ ಅಭಿವೃದ್ಧಿಗೊಸ್ಕರ ಎಸ್‌ಟಿಗೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಈಗಾಗಲೇ ಕಾಡುಗೊಲ್ಲರ ಬಗ್ಗೆ ಕುಲ ಶಾಸ್ತ್ರೀಯ ಅಧ್ಯಯನ ನಡೆದಿದೆ. ಹಿಂದಿನ ಸರ್ಕಾರದಲ್ಲಿ ಕಾಡುಗೊಲ್ಲರನ್ನು ಎಸ್‌ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಕೇಂದ್ರ ಸಂಪುಟದಲ್ಲಿ ತುರ್ತು ಅನುಮೋದನೆ ಪಡೆದು ಅನುಷ್ಠಾನಕ್ಕೆ ತುರುವುದಕ್ಕೆ ನೀವು ಪ್ರಯತ್ನಿಸಬೇಕು ಎಂದು ಸಿಎಂ ಗೆ ಮನವಿ ಮಾಡಿದರು. ಇದಲ್ಲದೆ ಅಲೆಮಾರಿ ಹಾಗೂ ಅಲೆಮಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮೂರು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಸಿಎಂ ಬೊಮ್ಮಾಯಿ ಗಮನ ಹರಿಸಿ ಸೂಕ್ತ ಕ್ರಮ ಕೈಗೊಂಡು ಸಮುದಾಯದ ಬೇಡಿಕೆ ಈಡೇರಿಸುತ್ತೇನೆಂದು ಭರವಸೆ ನೀಡಿದರು ಎಂದು ತಿಳಿದು ಬಂದಿದೆ. ಇದೇ ವೇಳೆ ಸಮುದಾಯದ ಮುಖಂಡರಿಂದ ಸಿಎಂ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್, ಹಿರಿಯೂರು ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ್, ಹರ್ತಿಕೋಟೆ ವೀರೇಂದ್ರ ಸಿಂಹ, ಮಾಜಿ ನಗರಸಭಾ ಸದಸ್ಯ ಪ್ರೇಮ್ ಕುಮಾರ್, ಆರಾಧ್ಯ, ಶ್ರೀನಿವಾಸ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Edited By : Vijay Kumar
PublicNext

PublicNext

01/08/2021 11:12 pm

Cinque Terre

39.43 K

Cinque Terre

0

ಸಂಬಂಧಿತ ಸುದ್ದಿ