ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯವರಷ್ಟು ಭಂಡರು ಯಾರೂ ಇಲ್ಲ ಬಿಡಿ: ಸಿದ್ದರಾಮಯ್ಯ

ಕಾರವಾರ: ಬಿಜೆಪಿಯವರಷ್ಟು ಭಂಡರು ಯಾರೂ ಇಲ್ಲ. ಆದರೆ ತಾವೇ ಅತ್ಯಂತ ಸುಸಂಸ್ಕೃತರು, ಉತ್ತಮ ಗುಣ-ನಡೆತೆಯುಳ್ಳವರು ಎಂಬಂತೆ ವರ್ತಿಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ಬಗ್ಗೆ ಖಾರವಾಗಿ ಮಾತಾಡಿದ್ದಾರೆ.

ನೆರೆ ಹಾನಿ ಬಗ್ಗೆ ಅವಲೋಕಿಸಲು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರಕ್ಕೆ ಬಂದಿರುವ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದರು. ರೇಣುಕಾಚಾರ್ಯ ಅವರು ತಮ್ಮ ವಿರುದ್ಧ ಮಾನಹಾನಿಯಾಗುವಂತ ವೀಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆ ಉತ್ತರಿಸಿ,, ತಮ್ಮ ವಿಡಿಯೋ ಬರಬಹುದು ಎಂಬ ಅನುಮಾನ ಸುಖಾಸುಮ್ಮನೆ ರೇಣುಕಾಚಾರ್ಯ ಅವರಿಗೆ ಏಕೆ ಬರುತ್ತದೆ? ಎಂದು ಪ್ರಶ್ನೆ ಮಾಡಿದ್ದಾರೆ

ಯಾವುದೋ ಕಾನೂನು ಬಾಹಿರ, ಅನೈತಿಕ ಕೃತ್ಯ ನಡೆಸಿ, ಸಿಕ್ಕಿಬಿದ್ದಿರಬಹುದು. ಎಷ್ಟೊಂದು ಮಂದಿ ರಾಜಕಾರಣಿಗಳಿದ್ದಾರೆ ಅವರನ್ನೆಲ್ಲಾ ಬಿಟ್ಟು ರೇಣುಕಾಚಾರ್ಯ, ಸದಾನಂದ ಗೌಡರದ್ದೇ ಏಕೆ ವೀಡಿಯೋ ಮಾಡ್ತಾರೆ? ಇವರ ಕಥೆ ಕಳ್ಳನ ಮನಸ್ಸು ಹುಳ್ ಹುಳ್ಳಗೆ ಎಂಬಂತಾಗಿದೆ ಎಂದು ಸಿದ್ದರಾಮಯ್ಯ ತಿವಿದಿದ್ದಾರೆ.

Edited By : Nagaraj Tulugeri
PublicNext

PublicNext

02/08/2021 12:08 pm

Cinque Terre

71.12 K

Cinque Terre

28

ಸಂಬಂಧಿತ ಸುದ್ದಿ