ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಂಜೆ ಸಚಿವ ಸಂಪುಟ ಕುರಿತು ಅಂತಿಮ ತೀರ್ಮಾನ ಸಾಧ್ಯತೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ರವಿವಾರ ತಡರಾತ್ರಿ ದೆಹಲಿಗೆ ತೆರಳಿದ್ದಾರೆ. ಅಮಿತ್ ಶಾ ಹಾಗೂ ಇತರ ನಾಯಕರನ್ನು ಭೇಟಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗಾಗಿ ಸಚಿವ ಸಂಪುಟದ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ಭಾನುವಾರ ರಾತ್ರಿ 9ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ ಅವರೊಂದಿಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ತಡರಾತ್ರಿವರೆಗೆ ದೆಹಲಿಯ ಅಜ್ಞಾತ‌ ಸ್ಥಳದಲ್ಲಿದ್ದು, ಹಲವು ಸುತ್ತಿನ ಮಾತುಕತೆ‌ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೂ ಕೂಡ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದು, ಬೊಮ್ಮಾಯಿ ಅವರು ಸಿದ್ಧಪಡಿಸಿ ತಂದಿದ್ದ ಪಟ್ಟಿಯನ್ನು ಪರಾಮರ್ಶಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

Edited By : Nagaraj Tulugeri
PublicNext

PublicNext

02/08/2021 01:19 pm

Cinque Terre

30.76 K

Cinque Terre

0

ಸಂಬಂಧಿತ ಸುದ್ದಿ