ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ (ಆ.3) ಸಂಜೆಯೊಳಗೆ ಸಚಿವ ಸಂಪುಟ ಪಟ್ಟಿ ಪ್ರಕಟ: ಬೊಮ್ಮಾಯಿ

ನವದೆಹಲಿ: ನಾಳೆ (ಆಗಷ್ಟ 3) ಸಂಜೆಯೊಳಗೆ ಕ್ಯಾಬಿನೆಟ್ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, "ಪ್ರಾದೇಶಿಕತೆ, ಸಮುದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಸಂಪುಟ ಪಟ್ಟಿ ಬಿಡುಗಡೆ ಮಾಡುತ್ತಾರೆ. ನಾಳೆ ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡಲಿದ್ದು, ನಾಳೆ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪ್ರಮಾಣ ವಚನದ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ" ಎಂದು ಸ್ಪಷ್ಟನೆ ನೀಡಿದರು.

ನಾವು ಬೇರೆ ಬೇರೆ ವಿಂಗಡನೆ ಮಾಡಿರುವ ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ. ನಮ್ಮ ಪಕ್ಷದಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ಬಿಜೆಪಿಯವರೇ. ನಾವು ಹೇಳಿದ್ದನ್ನು ಕೇಳಿಸಿಕೊಂಡು ನಾಳೆ ಹೈಕಮಾಂಡ್‍ನಿಂದ ಪಟ್ಟಿ ಬಿಡುಗಡೆ ಮಾಡುತ್ತಾರೆ. ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Edited By : Vijay Kumar
PublicNext

PublicNext

02/08/2021 11:17 pm

Cinque Terre

84.87 K

Cinque Terre

3

ಸಂಬಂಧಿತ ಸುದ್ದಿ