ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಗೆ 'ದೇಶದ ಸುರಕ್ಷತೆ ಬಗ್ಗೆ ಕಾಳಜಿನೇ ಇಲ್ಲಾ’ : ನಳಿನ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆಯನ್ನು ತರುತ್ತಿತ್ತು. ಆದರೆ, ಈಗ ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸಿರುವುದು ಕಾಂಗ್ರೆಸ್ ಪಕ್ಷದ ಭಯೋತ್ಪಾದಕರ ಪರ ನೀತಿಯನ್ನು ತೋರಿಸುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರೂ ಆಗಿರುವ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.

ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಆ ಪಕ್ಷಕ್ಕೆ ಇರುವ ನಿಷ್ಕಾಳಜಿಗೆ ಇದು ಸಾಕ್ಷಿ ಎಂದಿದ್ದಾರೆ.

ಮತದಾನದ ಸಮಯ ಬಂದಾಗ, ಕಾಂಗ್ರೆಸ್ನ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಎಲ್ಲ ಸಂಸದರು ಮಸೂದೆ ಸರಿಯಿಲ್ಲ ಎಂದು ಹೇಳಿ ಸದನವನ್ನು ಬಹಿಷ್ಕರಿಸಿದರು. ಭಯೋತ್ಪಾದಕರಿಗೆ ಆರ್ಥಿಕವಾಗಿ ಸಹಾಯ ಮಾಡಿದ ಮತ್ತು ಜಿಹಾದಿ ಸಾಹಿತ್ಯದಿಂದ ಅವರನ್ನು ಭಯೋತ್ಪಾದಕರನ್ನಾಗಿ ಮಾಡಿದ ಜನರ ಬಗ್ಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಗೆ ಸಹಾನುಭೂತಿ ಯಾಕೆ ಎಂದು ಅರ್ಥವಾಗುತ್ತಿಲ್ಲ ಎಂದೂ ಅವರು ಪ್ರಶ್ನಿಸಿದ್ದಾರೆ.

ಭಯೋತ್ಪಾದಕರ ದುಷ್ಕೃತ್ಯವನ್ನು ಗುರುತಿಸಿ, ಶಿಕ್ಷಿಸಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೊಗೆಯಲು ಕಠಿಣ ಕಾನೂನುಗಳನ್ನು ತಂದಿರುವ ಬಿಜೆಪಿ ಸರಕಾರ ಮತ್ತು ಕೇಂದ್ರದ ನಾಯಕರ ಕ್ರಮಕ್ಕೆ ರಾಜ್ಯದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

03/08/2021 01:01 pm

Cinque Terre

36.82 K

Cinque Terre

27

ಸಂಬಂಧಿತ ಸುದ್ದಿ