ಹೊಸದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣ ಸದ್ದು ಮಾಡುತ್ತಿದ್ದು, ವಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದಿವೆ. ಈ ಮಧ್ಯೆ ರಾಹುಲ್ ಗಾಂಧಿ ಇಂದು ವಿಪಕ್ಷ ನಾಯಕರನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದು, ಅದರಂತೆ ಪ್ರಮುಖ ವಿಪಕ್ಷ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಆರ್ ಎಸ್ ಎಸ್ ನ್ನು ಸೈದ್ಧಾಂತಿಕವಾಗಿ ವಿರೋಧಿಸುವ ವಿಪಕ್ಷಗಳ ಧ್ವನಿ ಗಟ್ಟಿಯಾಗಬೇಕಾದ ಸಮಯ ಬಂದಿದೆ ಎಂದು ಹೇಳಿದರು.
ಉಪಹಾರ ಕೂಟದ ಬಳಿಕ ವಿಪಕ್ಷ ನಾಯಕರು ಸಂಸತ್ತಿಗೆ ಸೈಕಲ್ ಜಾಥಾ ಹಮ್ಮಿಕೊಂಡಿದ್ದು ವಿಶೇವಾಗಿತ್ತು. ರಾಹುಲ್ ನೇತೃತ್ವದಲ್ಲಿ ನಡೆದ ಈ ಸೈಕಲ್ ಜಾಥಾದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದರು. ಅಲ್ಲದೇ ಪೆಗಾಸಸ್ ಹಗರಣದ ತನಿಖೆ ನಡೆಸುವಂತೆಯೂ ವಿಪಕ್ಷ ನಾಯಕರು ಈ ವೇಳೆ ಒತ್ತಾಯಿಸಿದರು.
ಈ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಭಾಗವಹಿಸದಿರುವುದು ಗಮನ ಸೆಳೆದಿದೆ.
PublicNext
03/08/2021 01:18 pm