ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಲಿಂಗಾಯತ ಕೋಟದಿಂದ ಅಚ್ಚರಿ ಹೆಸರು ಸೂಚಿಸಿದ ಹೈಕಮಾಂಡ್.!

ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಯಾರೆಲ್ಲಾ ಮಂತ್ರಿಯಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಮಧ್ಯೆ ಲಿಂಗಾಯತ ಕೋಟದಿಂದ ಅಚ್ಚರಿ ಹೆಸರನ್ನು ಹೈಕಮಾಂಡ್ ಸೂಚಿಸಿದೆ ಎಂಬ ಮಾಹಿತಿ ಲಭಿಸಿದೆ.

ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

ಶಾಸಕ ದತ್ತಾತ್ರೇಯ ಪಾಟೀಲ್ ಯುವ ರಾಜಕಾರಣಿಯಾಗಿದ್ದು, ಉತ್ತಮ ಮಾತುಗಾರಿಕೆ ಕಲೆ ಹೊಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಉತ್ಸಾಹದಿಂದ ಕೆಲಸ ನಿರ್ವಹಿಸುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವಾಗಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

Edited By : Vijay Kumar
PublicNext

PublicNext

03/08/2021 04:57 pm

Cinque Terre

42.58 K

Cinque Terre

4