ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಮಧ್ಯಾಹ್ನವೇ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ನಾಳೆ (ಆಗಸ್ಟ್​ 4)ರ ಮಧ್ಯಾಹ್ನ 2:15 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ನಡೆಯುತ್ತಿರುವ ಸಂಸದರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು (ಆಗಸ್ಟ್ 3) ರಾತ್ರಿ 9:15ಕ್ಕೆ ಹೊರಡಬೇಕಾಗಿದ್ದ ವಿಮಾನದ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ದೆಹಲಿಯಿಂದ ಬೆಳಗ್ಗೆ 6 ಗಂಟೆಯ ವಿಮಾನದಲ್ಲಿ ಅವರು ಪ್ರಯಾಣ ಮಾಡಲಿದ್ದಾರೆ. ಬೆಳಗ್ಗೆ 8.50 ಕ್ಕೆ ಬೆಂಗಳೂರಿಗೆ ತಲುಪಲಿದ್ದಾರೆ. ಬಳಿಕ ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 24 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Edited By : Vijay Kumar
PublicNext

PublicNext

03/08/2021 10:26 pm

Cinque Terre

88.97 K

Cinque Terre

2

ಸಂಬಂಧಿತ ಸುದ್ದಿ