ಮಥುರಾ: ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ವಿರುದ್ಧವಾಗಿ ಮತ ಚಲಾಯಿಸುವುದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಮೂಲಕ ಕೇಂದ್ರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ಹೇಳಿದೆ.
ಮಥುರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಕಿಸಾನ್ ಮಂಚ್ ರಾಷ್ಟ್ರೀಯ ಅಧ್ಯಕ್ಷ ಶೇಕರ್ ದೀಕ್ಷಿತ್, ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿ ಪಕ್ಷದ ವಿರುದ್ಧ ರೈತರು ತಕ್ಕ ಪಾಠ ಕಲಿಸಲಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ನಾಳೆ ಕಿಸಾನ್ ಸಂಸದ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಲಿದೆ. ಮುಂದಿನ ಕಾರ್ಯತಂತ್ರದ ಆಧಾರದ ಮೇಲೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ದೀಕ್ಷಿತ್ ಹೇಳಿದರು.
PublicNext
04/08/2021 08:15 am