ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಗಳ ಚಿತ್ತ ಈಗ ನೇರವಾಗಿ ವಿಧಾನಸೌಧದ ಕಡೆ ನೆಟ್ಟಿದೆ. ದೆಹಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ ತಮ್ಮ ಸಂಪುಟದಲ್ಲಿ ಮಂತ್ರಿಯಾಗಲಿರುವವರ ಹೆಸರಿನ ಪಟ್ಟಿಯನ್ನು ಹೈಕಮಾಂಡ್ ಒಪ್ಪಿಗೆ ಪಡೆದು ಬೆಂಗಳೂರಿಗೆ ಬಂದಿದ್ದಾರೆ. ಇನ್ನು ಒಂದು ಗಂಟೆಯ ಒಳಗಾಗಿ ಮಾಧ್ಯಮಗೋಷ್ಟಿ ಕರೆದು ಈ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬೊಮ್ಮಾಯಿಯವರು ರಾಜಧಾನಿ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಶಕ್ತಿಕೇಂದ್ರ ವಿಧಾನ ಸೌಧ ಮತ್ತು ಇಂದು ಅಪರಾಹ್ನ ನಡೆಯಲಿರುವ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಅವರ ಜೊತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಜೊತೆಗಿದ್ದಾರೆ.
PublicNext
04/08/2021 09:20 am