ಮೈಸೂರು: ಬೊಮ್ಮಾಯಿ ಸರ್ಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಮಾಜಿ ಸಚಿವ ಎಸ್.ಎ ರಾಮದಾಸ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂ.1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.
PublicNext
04/08/2021 02:10 pm