ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಾವೇರಿ ಶಾಸಕ ನೆಹರು ಓಲೇಕಾರ್ ಕಿಡಿಕಾರಿದ್ದಾರೆ. ಅಲ್ಲದೆ ಅವರ ಬೆಂಬಲಿಗರು ಶಾಸಕರ ಭವನದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೂ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ತಪ್ಪಿಸಿದ್ದೇ ಸಿಎಂ ಬೊಮ್ಮಾಯಿ. ಅವರು ದ್ವೇಷ ರಾಜಕೀಯ ಮಾಡ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಓಲೇಕಾರ್ ಕಿಡಿಕಾರಿದ್ದಾರೆ.
ಯಡಿಯೂರಪ್ಪ ಇದ್ದಾಗಲೂ ಅವಕಾಶದಿಂದ ವಂಚಿತನಾದೆ, ಈಗಲೂ ಸಹ ಯಾವುದೇ ಭರವಸೆ ನೀಡಿಲ್ಲ. ಆದರಿಂದ ನಾವು ಪಕ್ಷದ ಜೊತೆಯಲ್ಲಿದ್ದು, ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ. ಇನ್ನೂ ಸಂಘ ಪರಿವಾರದವನ್ನು ಭೇಟಿ ಮಾಡಿ ಮಾತನಾಡ್ತೇನೆ, ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಾನು ಹೋಗಲ್ಲ, ನನಗೆ ಇನ್ವಿಟೇಷನ್ ಸಹ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
PublicNext
04/08/2021 02:46 pm