ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೊನೆಗೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದು, ರಾಜ್ಯಪಾಲರು ಪ್ರತಿಜ್ಞಾವಿಧಿಯನ್ನ ಭೋದಿಸಿದಸರು.
ಬೀದರ್ ಜಿಲ್ಲೆಯ ಔರಾದ್ ಶಾಸಕ ಪ್ರಭು ಚವ್ಹಾಣ್ ಲಂಬಾಣಿ ಡ್ರೆಸ್‌ನಲ್ಲಿ ರಾಜಭವನಕ್ಕೆ ಬಂದು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದ್ದೇನೆ. ಅಲ್ಲಿ ಅನೇಕ ಕಾರ್ಯಗಳು ಬಾಕಿ ಇರುವುದರಿಂದ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಹೀಗಾಗಿ ನನಗೆ ಮತ್ತೆ ಪಶುಸಂಗೋಪನೆ ಇಲಾಖೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು.
PublicNext
04/08/2021 04:35 pm