ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಝೀರೋ ಟ್ರಾಫಿಕ್‌ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ.!

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವಲ್ಲಿ ಮೊಟ್ಟೆ ಡೀಲ್ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಯಶಸ್ವಿಯಾಗಿದ್ದಾರೆ. ವಿಶೇಷವೆಂದರೆ ಅವರು ಬೆಂಗಳೂರು ವಿಮಾನ ನಿಲ್ದಾಣದಿಂದ ಝೀರೋ ಟ್ರಾಫಿಕ್​​ನಲ್ಲಿಯೇ ಬಂದು ಪ್ರಮಾಣವಚನ ಸ್ವೀಕಾರ ಮಾಡಿ ಸುದ್ದಿಯಾಗಿದ್ದಾರೆ.

ಹೌದು. ಕೆಲವು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಶಶಿಕಲಾ ಜೊಲ್ಲೆ ಅವರು, ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಜೊಲ್ಲೆ ಅವರು ದೆಹಲಿಯಿಂದ ಇಂದು ಬೆಳಗ್ಗೆ ಪ್ರಯಾಣ ಆರಂಭಿಸಿದ್ದರು. ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಇಂದು ಮಧ್ಯಾಹ್ನ 1:30ಕ್ಕೆ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಕೆಲ ಸಮಸ್ಯೆಗಳಿಂದಾಗಿ ವಿಮಾನ ಬೆಂಗಳೂರು ವಿಮಾನ ನಿಲ್ದಾಣವನ್ನು 2 ಗಂಟೆಗೆ ತಲುಪಿತು. ಹೀಗಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ತಡವಾಗುತ್ತದೆ ಎಂದು ದೇವನಹಳ್ಳಿಯಿಂದ ರಾಜಭವನಕ್ಕೆ ಝೀರೋ ಟ್ರಾಫಿಕ್​ ವ್ಯವಸ್ಥೆ ಕಲ್ಪಿಸಲಾಯಿತು.

Edited By : Vijay Kumar
PublicNext

PublicNext

04/08/2021 04:57 pm

Cinque Terre

48.92 K

Cinque Terre

13

ಸಂಬಂಧಿತ ಸುದ್ದಿ