ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್ಲವನ್ನೂ ಮರೆತು ಪಕ್ಷ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವು ತಂದಿದೆ: ಶಾಸಕಿ ಪೂರ್ಣಿಮಾ

ಚಿತ್ರದುರ್ಗ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರು ಸಾಮಾಜಿಕ ಜಾಲತಾಣದ ಫೇಸ್‌ಬುಕ್‌ನಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?:

ಎಲ್ಲರಿಗೂ ನಮಸ್ಕಾರ, "ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇದ್ದಾಗಲೂ ನಾನು ಪಕ್ಷನಿಷ್ಠೆ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಹಾಗೂ ಎಂಎಲ್‌ಸಿ ಎಲ್ಲೂ ಕೂಡ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ. ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯವಾಗಿದ್ದವು ಪಕ್ಷವು ಅದನ್ನೆಲ್ಲ ಮರೆತಿದೆ. ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ."

ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ, ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ. ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿ ಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್ರವರು, ಚಂದ್ರಪ್ಪ ರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು.

ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯವು 80ರಷ್ಟು ಭಾಗವು ಬಿಜೆಪಿಗೆ ಮತ ನೀಡಿಡೆ ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು,ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ. ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಅಭಿನಂದನೆಗಳು.

Basavaraj Bommai Bharatiya Janata Party (BJP) Chief Minister of Karnataka Narendra Modi Amit Shah BS Yediyurappa C T Ravi Arun Singh Vijayendra Yeddyurappa J.P.Nadda

Edited By : Vijay Kumar
PublicNext

PublicNext

04/08/2021 05:18 pm

Cinque Terre

49.17 K

Cinque Terre

5

ಸಂಬಂಧಿತ ಸುದ್ದಿ