ಚಿತ್ರದುರ್ಗ : ಹಿರಿಯೂರು ವಿಧಾನಸಭಾ ಕ್ಷೇತ್ರದ ಆಯ್ಕೆಯಾಗಿರುವ ಹಾಗೂ ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿಯಾಗಿರುವ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹಿರಿಯೂರು ನಗರದ ಮೂಲಕ ಹಾದುಹೋಗುವ ಬೆಂಗಳೂರು - ಪುನಾ ಮತ್ತು ಚಿತ್ರದುರ್ಗ ದಿಂದ ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನಾಲ್ಕರ ರಸ್ತೆಯನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ,ಆವೇಶ ವ್ಯಕ್ತಪಡಿಸಿದರು. ಮೊದಲಿನಿಂದಲೂ ಪೂರ್ಣಿಮಾ ಹೆಸರು ಕೇಳಿ ಬಂದಿತ್ತು. ಇದೀಗ ಇದ್ದಕ್ಕಿದ್ದಂತೆ ಸಚಿವ ಸ್ಥಾನದಿಂದ ಅವರನ್ನು ಕೈಬಿಟ್ಟು ಭ್ರಷ್ಟಾಚಾರ ನಡೆಸಿದವರಿಗೆ ಸಚಿವ ಸ್ಥಾನ ನೀಡಿದ್ದಾರೆ. ವಚನ ಭ್ರಷ್ಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದೆವೆ ಎಂದರು.
ರಾಜ್ಯದಲ್ಲಿ ಸುಮಾರು 40 ಲಕ್ಷ ಗೊಲ್ಲ ಸಮುದಾಯ ಇದೆ. ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಚಿಕ್ಕನಾಯಕನಹಳ್ಳಿ, ಶಿರಾ, ಗುಬ್ಬಿ, ಚಿಂತಾಮಣಿ ಇತರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಗೊಲ್ಲ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಲೋಕಸಭಾಉಪಚುನಾವಣೆ ಹಾಗೂ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ಸೀಮಿತ ಮಾಡಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತದವರನ್ನಾ ಬಿಜೆಪಿ ಪಕ್ಷ ಮರೆತಿದೆ ಎಂದರು. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುತ್ತೆವೆ ಎಂದರು. ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಗೊಲ್ಲ ಸಮುದಾಯ ಕಾರಣವಾಗಿದೆ. ನಮ್ಮ ನಾಯಕಿಯ ಹೆಸರು ತೋರಿಸಿ ಇದೀಗ ಅವಮಾನ ಮಾಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ಸರ್ಕಾರಕ್ಕೆ ನೇರವಾಗಿ ಸಂದೇಶ ನೀಡಿದರು.
ಒಟ್ಟಾರೆಯಾಗಿ ಮೊದಲಿನಿಂದಲೂ ಮಹಿಳೆಯರಿಗೆ ಸ್ಥಾನಮಾನ ನೀಡುವುದಾಗಿ ಹೇಳಿಕೊಂಡು ಬಂದಿದ್ದ ಬಿಜೆಪಿ ಪಕ್ಷ ಇದೀಗ ಹಿರಿಯೂರು ಕ್ಷೇತ್ರದ ಜನತೆಗೆ ಹಾಗೂ ಚಿತ್ರದುರ್ಗ ಜನತೆಗೆ ನಿರಾಸೆ ಮೂಡಿಸಿದೆ. ಜಿಲ್ಲೆಯಲ್ಲಿ ಶ್ರೀರಾಮುಲು ಹೊರತುಪಡಿಸಿ ಬೇರೆ ಯಾವುದೇ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು ದುರ್ಗದ ಜನತೆ ಬಾರಿ ಅಘಾತ ಹಾಗೂ ನಿರಾಸೆ ಉಂಟಾಗಿದೆ.
PublicNext
04/08/2021 06:44 pm