ಬೆಂಗಳೂರು: ಬಿ.ಎಸ್.ಯುಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ಸುರೇಶ್ ಕುಮಾರ್ ಭಾವುಕ ವಿದಾಯ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಮಾತನಾಡಿದ ಸುರೇಶ್ ಕುಮಾರ್ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. "ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲಿ ಹಿರಿಯರಾದ ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್, ಆರ್.ಶಂಕರ್, ಶ್ರೀಮಂತ ಪಾಟೀಲ್ ಅವರನ್ನೂ ಸಂಪುಟ ಕೈಬಿಡಲಾಗಿದೆ. ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್‌ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.
PublicNext
04/08/2021 08:30 pm