ಬೆಂಗಳೂರು: 'ಮೇಕೆದಾಟು ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಈ ವಿಚಾರವನ್ನು ತಮಿಳುನಾಡಿನಲ್ಲಿ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಅಲ್ಲಿ ಯಾವುದೇ ಪಕ್ಷದವರು ಇರಬಹುದು, ಅವರು ರಾಜಕಾರಣಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸ ಬಳಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ಕುಡಿಯುವ ನೀರು, ವಿದ್ಯುತ್ಛಕ್ತಿ ಮತ್ತು ಕಷ್ಟ ಕಾಲದಲ್ಲಿ ನೀರನ್ನು ಹಂಚಕೆ ಮಾಡಬಹುದು ಎಂದು ಎಲ್ಲರಿಗೂ ಗೊತ್ತಿದೆ. ಈ ಯೋಜನೆ ಆ ಉದ್ದೇಶ ಹೊಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಯೋಜನೆಯ ಬಗ್ಗೆ ತಿಳಿಸಿದ್ದೇನೆ. ರಾಜ್ಯದ ಸಂಸದರ ನಿಯೋಗದ ಜೊತೆಗೂ ಭೇಟಿ ಮಾಡಿ ಒತ್ತಾಯ ಮಾಡಿದ್ದೇನೆ' ಎಂದರು.
PublicNext
05/08/2021 01:26 pm