ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಕಾಂಗಿ ಮಹಾನಾಯಕ: ಡಿಕೆಶಿ ಕಾಲೆಳೆದ ಬಿಜೆಪಿ

ಬೆಂಗಳೂರು: ಕೆಪಿಸಿಸಿಗೆ ಪದಾಧಿಕಾರಿಗಳ ನೇಮಕ ವಿಳಂಬವಾಗುತ್ತಿರುವುದನ್ನು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಈ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಡಿ.ಕೆ ಶಿವಕುಮಾರ್‌ ಅವರನ್ನು #ಏಕಾಂಗಿಮಹಾನಾಯಕ ಎಂಬ ಹ್ಯಾಷ್ ಟ್ಯಾಗ್‌ ಬಳಸಿ ಲೇವಡಿ ಮಾಡಿದೆ.

'ಎಐಸಿಸಿಗೆ ಹಂಗಾಮಿ ಅಧ್ಯಕ್ಷರು ಕಾಯಂ ಆಗಿದ್ದಾರೆ. ಏಕೆಂದರೆ ಕುಟುಂಬದ ಅಧಿಕಾರ ಕಾಪಾಡಿಕೊಳ್ಳುವುದಕ್ಕೆ ಇರುವುದು ಅದೊಂದೇ ದಾರಿ. ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಏನಾಗಿದೆ? ಅಧಿಕಾರ ಸ್ವೀಕರಿಸಿ ವರ್ಷವಾದರೂ ಮಹಾನಾಯಕ ಇನ್ನೂ ಏಕಾಂಗಿಯಾಗಿಯೇ ಉಳಿದಿದ್ದಾರೆ. ಪದಾಧಿಕಾರಿಗಳನ್ನು ನೇಮಿಸಿಕೊಳ್ಳಲಾರದೇ ಪರದಾಡುತ್ತಿದ್ದಾರೆ' ಎಂದು ಬಿಜೆಪಿ ಕುಟುಕಿದೆ.

'ಪದಾಧಿಕಾರಿಗಳ ನೇಮಕಕ್ಕೂ ಪರಿತಪಿಸುತ್ತಿರುವ ಡಿ.ಕೆ ಶಿವಕುಮಾರ್‌ ಅವರ ಸುತ್ತಲೂ ಶತ್ರುಗಳು ತುಂಬಿಕೊಂಡಿದ್ದಾರೆ. ಐವರು ಕಾರ್ಯಾಧ್ಯಕ್ಷರ ನೇಮಕವಾಗುವಂತೆ ನೋಡಿಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷರ ಕೈ ಕಟ್ಟಿ ಹಾಕಿದ್ದಾರೆ. ರಾಹುಲ್ ಗಾಂಧಿಯ ಎದುರು ಕಣ್ಣೀರಿಟ್ಟರೂ ಪ್ರಯೋಜನವಿಲ್ಲದಂತಾಗಿದೆ' ಎಂದು ಬಿಜೆಪಿಯು ಡಿಕೆಶಿ ಅವರನ್ನು ವ್ಯಂಗ್ಯವಾಡಿದೆ.

Edited By : Vijay Kumar
PublicNext

PublicNext

05/08/2021 01:47 pm

Cinque Terre

28.95 K

Cinque Terre

0

ಸಂಬಂಧಿತ ಸುದ್ದಿ