ಬೆಂಗಳೂರು: ಭ್ರಷ್ಟಾಚಾರ ಆರೋಪಿ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ, ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಸಮಾಜ ಸೇವೆ ಮಾಡಿದ ಜನ ಸೇವಕ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡಿ ಅಧಿಕಾರಿಗಳು ಇಂದು ನಡೆಸಿದ ದಾಳಿಯನ್ನು ಖಂಡಿಸಿ ಶಾಸಕ ಜಮೀರ್ ಅಹ್ಮದ್ ಮನೆ ಮುಂದೆ ಜಮಾಯಿಸಿದ ಬೆಂಬಲಿಗರು, ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ ಜಮೀರ್ ಅಭಿಮಾನಿಗಳು, ಬಿಜೆಪಿ ಸರ್ಕಾರ ಇ.ಡಿ ಮತ್ತು ಐಟಿ, ಸಿಬಿಐ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು.
PublicNext
05/08/2021 04:31 pm