ಬೆಂಗಳೂರು: ಕೆ.ಅಣ್ಣಾಮಲೈ ಬೆನ್ನಲ್ಲೇ ಮತ್ತೋರ್ವ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ವದಂತಿ ಮತ್ತಷ್ಟು ದಟ್ಟವಾಗಿದೆ.
ಹೌದು. ಇದಕ್ಕೆ ಕಾರಣ ಇತ್ತೀಚೆಗೆ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿರುವುದು. ಈ ಮೂಲಕ ಕರ್ನಾಟಕದ ಸಿಂಗಂ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರಾ ಎನ್ನುವ ಅನುಮಾನ ಶುರುವಾಗಿದೆ. ರವಿ ಡಿ ಚನ್ನಣ್ಣನವರ್ ಅವರು ಕಳೆದ ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ಭೇಟಿಯಾಗಿದ್ದಾರೆ. ದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿಯ ಹಳೆ ಆಫೀಸ್ನಲ್ಲಿ ಬಿ.ಎಲ್.ಸಂತೋಷ್ ಅವರನ್ನ ಭೇಟಿಯಾಗಿ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ರವಿ ಚನ್ನಣ್ಣನವರ್ ಮತ್ತು ಬಿಎಲ್ ಸಂತೋಷ್ ಮಧ್ಯೆ ಬಳ್ಳಾರಿ ಲೋಕಸಭೆ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಟಿಕೆಟ್ ಪಡೆದು ಸ್ಪರ್ಧಿಸುವ ಬಗ್ಗೆ ಇಬ್ಬರು ಗಣ್ಯರು ಚರ್ಚೆ ನಡೆಸಿದ್ದಾರೆ ಅಂತಾ ಹೇಳಲಾಗಿದೆ. ಇನ್ನು ಚನ್ನಣ್ಣನವರ್ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿರುವ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಕೂಡ ದೆಹಲಿಯಲ್ಲೇ ಇದ್ದರು.
PublicNext
06/08/2021 07:31 am