ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಹೆಸರು ಕೇಳಿ ಬಂದ ಕಾರಣ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಡೆಸಿದ ದಾಳಿ ಈಗ ಅಂತ್ಯಗೊಂಡಿದೆ.
ಗುರುವಾರ ಬೆಳಿಗ್ಗೆ ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಜಮೀರ್ ನಿವಾಸದ ಮೇಲೆ ದಾಳಿ ಮಾಡಿದ್ದ ED ಅಧಿಕಾರಿಗಳು 24 ಗಂಟೆಗಳ ಪರಿಶೀಲನೆ ನಡೆಸಿ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಸಿಕ್ಕ ಹಲವು ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ ಎನ್ನಲಾಗಿದೆ.
PublicNext
06/08/2021 07:58 am