ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಟ್ಟು ಹಬ್ಬದ ದಿನವೇ ರಾಜಕೀಯ ನಿವೃತ್ತಿ ಘೋಷಿಸಿದ ವಿ. ಶ್ರೀನಿವಾಸ ಪ್ರಸಾದ್

ಚಾಮರಾಜನಗರ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ತಮ್ಮ ಹುಟ್ಟುಹಬ್ಬದ ದಿನದಂದೇ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

ಶುಕ್ರವಾರ 75ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ 'ಶ್ರೀನಿವಾಸ್‌ ಪ್ರಸಾದ್‌ರ 50 ವರ್ಷದ ರಾಜಕೀಯ ಜೀವನ' ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಶ್ರೀನಿವಾಸ್‌ ಪ್ರಸಾದ್‌ ಅವರು, "ಮುಂದೆ ನಾನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ. ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ" ಎಂದು ಘೋಷಿಸಿದರು.

Edited By : Vijay Kumar
PublicNext

PublicNext

06/08/2021 12:56 pm

Cinque Terre

33.03 K

Cinque Terre

1

ಸಂಬಂಧಿತ ಸುದ್ದಿ