ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ 7,800 ಕೋಟಿ ರೂ. ಹಾನಿ: ಗೋವಿಂದ ಕಾರಜೋಳ

ಬೆಳಗಾವಿ: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 7800 ಕೋಟಿ ರೂಪಾಯಿ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಚಿವರು, ಮಹಾ ಮಳೆಯಿಂದ 21,300 ವಿದ್ಯುತ್ ಕಂಬಗಳು‌ ಹಾಗೂ 5,300 ಟ್ರಾನ್ಸ್ ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ‌ ಅಂದಾಜು ಮಾಡಲಾಗುವುದು. ಸಮಗ್ರ ಸಮೀಕ್ಷೆ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. 51 ಕಾಳಜಿ 38 ಸಾವಿರ ಜನರಿಗೆ ಆಶ್ರಯ ನೀಡಲಾಗಿದೆ. ಇನ್ನೂ ವಾರದ ಕಾಲ ಅವರಿಗೆ ಆಶ್ರಯ ನೀಡಲು ಸೂಚನೆ. ಪರಿಹಾರವನ್ನು ಆರ್.ಟಿ.ಜಿ.ಎಸ್‌. ಮೂಲಕ ಪಾವತಿಗೆ ಸೂಚನೆ ನೀಡಲಾಗಿದೆ ಎಂದರು.

ನಾಳೆ ಚಿಕ್ಕೋಡಿ ವಿಭಾಗದಲ್ಲಿ ಹಾನಿ ಪರಿಶೀಲಿಸಿ, ಅಧಿಕಾರಿಗಳ ಸಭೆಯನ್ನು ನಡೆಸಲಾಗುವುದು. ಜಿಲ್ಲಾಧಿಕಾರಿ ಖಾತೆಯಲ್ಲಿ 92 ಕೋಟಿ ರೂಪಾಯಿ ಇದೆ. ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮತ್ತಿತರ ಮೂಲಸೌಕರ್ಯಗಳ ತುರ್ತು ದುರಸ್ತಿಗೆ 120 ಕೋಟಿ ಹಣ ಬಿಡುಗಡೆ ಮಾಡಲು ಕೋರಲಾಗಿದೆ. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಜನರು ಮರಣ ಹೊಂದಿದ್ದಾರೆ. ಕೇಂದ್ರ ಸರಕಾರ ಕೂಡ ಮಾರ್ಗಸೂಚಿ ಪ್ರಕಾರ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಹಾನಿ ವರದಿ ಸಲ್ಲಿಸಿದ ಬಳಿಕ ಕೇಂದ್ರ ಅಧ್ಯಯನ ತಂಡ ಭೇಟಿ‌ ನೀಡಿ ಪರಿಶೀಲಿಸಿದ ಬಳಿಕ ಮತ್ತಷ್ಟು ಹಣ ಬಿಡುಗಡೆ ಮಾಡಲಿದೆ. ಪ್ರವಾಹ ಪರಿಹಾರ ವಿತರಣೆಯಲ್ಲಿ ಲೋಪದೋಷ ಎಸಗಿದರೆ ಕೂಡಲೇ ಅಮಾನತು ಮಾಡಬೇಕು. ಅಗತ್ಯಬಿದ್ದರೆ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಲಸಿಕೆಗಳನ್ನು ಪೂರೈಸಿ ಲಸಿಕಾಕರಣ ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸಂಭವನೀಯ ಕೋವಿಡ್ 3ನೇ ಅಲೆ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಸಿಇಓ ದರ್ಶನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

06/08/2021 03:50 pm

Cinque Terre

32.67 K

Cinque Terre

1

ಸಂಬಂಧಿತ ಸುದ್ದಿ