ಬೆಂಗಳೂರು: ಕನ್ನಡಿಗರು ಊಟ ಮಾಡುವಾಗ ಇಂದಿರಾ ಗಾಂಧಿಯ ಕರಾಳ ದಿನ ನೆನಪು ಮಾಡಿಕೊಳ್ಳುವುದು ಬೇಡ. ಹಾಗಾಗಿ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಎಂ ಬಸವರಾಜ್ ಬೊಮ್ಮಾಯಿ ಒತ್ತಾಯಿಸಿದ್ದಾರೆ. ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸುವಂತೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ‘ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ‘ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ ಸಿಟಿ ರವಿ ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪರ ವಿರೋಧದ ಚರ್ಚೆ ನಡೆದಿದ್ದು, ಕೆಲವರು ಸಿಟಿ ರವಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನೂ ಕೆಲವರು, ‘ಹಾಗಾದರೇ ಕರ್ನಾಟಕದ ಯೋಜನೆಗಳಿಗೆ ಇಟ್ಟಿರುವ ವಾಜಪೇಯಿ, ಸಾವರ್ಕರ್ ಅವರ ಹೆಸರನ್ನೂ ಬದಲಾವಣೆ ಮಾಡಿ‘ ಎಂದು ಸವಾಲು ಎಸೆದಿದ್ದಾರೆ. ಈ ಮೂಲಕ ಸಿಟಿ ರವಿ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.
PublicNext
07/08/2021 01:56 pm