ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಂಪುಟ ರಚನೆಯಾದಾಗ ಅಸಮಾಧಾನ ಸಹಜ; ಸಿಎಂ ಬಸವರಾಜ ಬೊಮ್ಮಾಯಿ...!

ಹುಬ್ಬಳ್ಳಿ: ಆನಂದ್ ಸಿಂಗ್ ನನ್ನ ಹಳೆಯ ಸ್ನೇಹಿತ.ಅವರನ್ನು ಭೇಟಿ ಮಾಡಿ ಮಾತನಾಡುತ್ತೆನೆ. ಅವರು ಯಾವ ಖಾತೆ ಹೇಳಿದ್ದರು ಎನ್ನುವುದು ಬಹಿರಂಗ ಪಡಿಸೋಕೆ ಆಗಲ್ಲ. ಸಂಪುಟ ರಚನೆ ಆದಾಗ ಅಸಮಾಧಾನ ಸಹಜ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇವೆಗೌಡರನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯವಿಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದರು.

ಇನ್ನೂ ಪ್ರೀತಂಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪ್ರೀತಂಗೌಡ ಯುವ ಉತ್ಸಾಹಿ ಶಾಸಕ. ಅವರು ಕೂಡಾ ನನ್ನ ಯುವ ಸ್ನೇಹಿತ. ಅವರು ಯಾವುದೇ ರೀತಿ ತಿಳಿದುಕೊಳ್ಳೋದು ಬೇಡ. ಉತ್ಸಾಹದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

ಬೊಮ್ಮಾಯಿ ಸರ್ಕಾರ ಜನತ ಪರಿವಾರ ಶಾಸಕ ಎನ್ನುವ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ 15 ವರ್ಷದಿಂದ ಬಿಜೆಪಿಯಲ್ಲಿದ್ದೆನೆ. ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನೂ ಹೌದು,ಬಿಜೆಪಿಯ ಸಿಎಂನೂ ಹೌದು. ಹೆಚ್ ಡಿಕೆ ಆ ರೀತಿ ಅಸಂಬದ್ಧ ಹೇಳಿಕೆ ನೀಡಬಾರದು‌ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಶೇಖರ ಸಿಂಧೂರ ಸಾವಿನಿಂದ ಬಹಳ ದುಖಃವಾಗಿದೆ. ನಾನು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ವೈಯಕ್ತಿವಾಗಿಯೂ ನನಗೆ ಬಹಳ ನಷ್ಟವಾಗಿದೆ. ಶಿಗ್ಗಾಂವಿ-ಸವಣೂರು ಕ್ಷೇತ್ರದ ಅಭಿವೃದ್ದಿ ಬಗ್ಗೆ ಕನಸು ಕಂಡಿದ್ದರು. ಅವರ ಅಂತ್ಯಕ್ರಿಯೆಗೆ ಹೊಗುತ್ತಿದ್ದೆನೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೊಮ್ಮಾಯಿಯವರ ಹೇಳಿದರು.

Edited By : Nagesh Gaonkar
PublicNext

PublicNext

07/08/2021 03:47 pm

Cinque Terre

61.78 K

Cinque Terre

0

ಸಂಬಂಧಿತ ಸುದ್ದಿ