ಬೆಂಗಳೂರು: ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್ ಗಳ ಹೆಸರನ್ನು 'ಅನ್ನಪೂರ್ಣೇಶ್ವರಿ ಕ್ಯಾಂಟೀನ್' ಎಂದು ಬದಲಾಯಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಕನ್ನಡಿಗರು ಆ ಕ್ಯಾಂಟೀನ್ ನಲ್ಲಿ ಊಟ ಮಾಡುವಾಗ ತುರ್ತು ಪರಿಸ್ಥಿತಿಯ ಕರಾಳ ದಿನಗಳು ನೆನಪಾಗಬಾರದು ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ರಾಜ್ಯ ಕಾಂಗ್ರೆಸ್, 'ರಾಜ್ಯದ್ರೋಹಿ ಸಿ.ಟಿ ರವಿ ಕಳೆದ 2 ವರ್ಷದಲ್ಲಿ ನಿಮ್ಮ ಸರ್ಕಾರದ ಒಂದೇ ಒಂದು ಜನಪರ ಯೋಜನೆಯ ಹೆಸರು ಹೇಳಿ.
ಇಂದಿರಾ ಕ್ಯಾಂಟೀನ್‌ಗೆ ಅನುದಾನ ಕೊಡಲಾಗದ, ಒಂದೂ ಜನಪರ ಯೋಜನೆ ಜಾರಿಗೊಳಿಸಲಾಗದ ಸಿಟಿ ರವಿಯ ಈ ಮಾತು ಕೈಲಾಗದವನು ಮೈ ಪರಚಿಕೊಂಡಂತೆ!
ಅಂದಹಾಗೆ, ದೀನದಯಾಳ್ ಯಾವ ದೊಣ್ಣೆನಾಯಕನೆಂದು ಮೇಲ್ಸೇತುವೆಗೆ ಹೆಸರಿಟ್ಟಿದ್ದೀರಿ? ಎಂದು ಸಿ.ಟಿ ರವಿಗೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.
PublicNext
07/08/2021 03:53 pm