ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈ ಖಾತೆಯಲ್ಲಿ ಆನಂದವಿಲ್ಲ ಎಂದ ಆನಂದ್ ಸಿಂಗ್

ಬಳ್ಳಾರಿ: ನಾನು ಕೇಳಿದ್ದ ಖಾತೆ ಬೇರೆ. ಇವರು ಕೊಟ್ಟಿದ್ದು ಬೇರೆ ಎಂದು ಸದ್ಯ ಪ್ರವಾಸೋದ್ಯಮ ಖಾತೆ ನಿಭಾಯಿಸುತ್ತಿರುವ ಸಚಿವ ಆನಂದ್ ಸಿಂಗ್ ತಮ್ಮ ಅಸಮಧಾನ ಹೊರಹಾಕಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್, ಖಾತೆ ಹಂಚಿಕೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ನೀಡಿದ್ದು ನಾನು, ಆ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಮೇ ಒಂದರಂದು ನಾನು ರಾಜೀನಾಮೆ ನೀಡಿದ್ದೆ. ನನ್ನಿಂದಲೇ ಬಿಜೆಪಿ ಸರ್ಕಾರ ಬಂದಿದೆ ಅನ್ನೋದಲ್ಲ. ನನ್ನಂತೆ ಹಲವು ಜನರು ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಯಾಗಿದೆ. ಆದರೆ ಇದೀಗ ಖಾತೆ ಹಂಚಿಕೆಯಲ್ಲಿ ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು ಇದನ್ನು ಬದಲಾವಣೆ ಮಾಡಬೇಕೆಂದು ಯಡಿಯೂರಪ್ಪ ಮತ್ತು ಸಿಎಂ. ಬೊಮ್ಮಯಿ ಅವರನ್ನು ಕೇಳುತ್ತೇನೆ ಎಂದು ಅಸಮಾಧಾನ ಹೊರಹಾಕಿದರು.

Edited By : Nagaraj Tulugeri
PublicNext

PublicNext

07/08/2021 04:33 pm

Cinque Terre

104.79 K

Cinque Terre

8