ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿನ್ನೆ ಸಂಜೆ ಭೇಟಿ ನೀಡಿದ್ದು, ಇನ್ನು ಇವರ ಭೇಟಿ ಕೂತಹಲಕ್ಕೆ ಕಾರಣವಾಗಿದೆ.
ಶೆಟ್ಟರ್ ನಿವಾಸದಲ್ಲಿ ಸುಮಾರು ಗಂಟೆಗಳ ಕಾಲ ಜಾರಕಿಹೊಳಿ ಇದ್ದರು, ನಂತರ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಕೆಲವು ನಿಮಿಷ ಚರ್ಚಿಸಿ, ಮುಂದೆ ಯಾವ ರೀತಿ ರಾಜಕೀಯ ಬೆಳವಣಿಗೆ ಹಾಗೂ ಸಂಘಟನೆ ಕುರಿತು ಚರ್ಚೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದೂ ಸೌಹಾರ್ದ ಭೇಟಿ ಎಂದು ಹೇಳಲಾಗಿದ್ದರು ಸಹ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
PublicNext
08/08/2021 12:21 pm