ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾವ್ಯಾರೂ ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು : ಇಂದಿರಾ ಕ್ಯಾಂಟೀನ್ ಹೆಸರಿನ ವಿವಾದ ಮತ್ತೆ ಭುಗಿಲೆದ್ದಿದೆ. ಇದು ಕಾಂಗ್ರೆಸ್-ಬಿಜೆಪಿ ವಾಕ್ಸಮರಕ್ಕೆ ಕಾರಣವಾಗಿದೆ. ಇಂದಿರಾ ಕ್ಯಾಂಟೀನ್ ಹೆಸರನ್ನು 'ಅಣ್ಣಪೂರ್ಣೇಶ್ವರಿ ಕ್ಯಾಂಟೀನ್' ಎಂದು ಬದಲಾಯಿಸಲು ಬಿಜೆಪಿ ನಾಯಕ ಸಿ.ಟಿ ರವಿ ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು.

ಈ ಕುರಿತಂತೆ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರು ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮುಖ್ಯಮಂತ್ರಿಗೆ ಸಲಹೆ ಕೊಟ್ಟಿದ್ದಾರೆ. ಇದನ್ನು ನೋಡಿಕೊಂಡು ಕೂರಲು ನಾವ್ಯಾರೂ ಕೈಗೆ ಬಳೆ ತೊಟ್ಟಿಲ್ಲ. ಇಂದಿರಾ ಗಾಂಧಿ ಅವರು ದೇಶಕ್ಕೆ ಮಾಡಿದ ತ್ಯಾಗ, ಬಡವರಿಗಾಗಿ ಕೊಟ್ಟ ಕಾರ್ಯಕ್ರಮವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರು ಸ್ಮರಿಸುತ್ತಾರೆ. ಗಿಮಿಕ್ ಪಾಲಿಟಿಕ್ಸ್ ಮಾಡುವುದು ಬೇಡ. ನಾವು ಸರ್ಕಾರದಲ್ಲಿ ಇದ್ದಾಗ ವಾಜಪೇಯಿ ಹೆಸರಲ್ಲಿ ಇರೋದನ್ನ ಬದಲಿಸಲಿಲ್ಲ. ವಾಜಪೇಯಿ ಸಾರಿಗೆ ಹೆಸರು ಬದಲಾವಣೆ ಮಾಡಲಿಲ್ಲ. ನಾವು ದ್ವೇಷದ ರಾಜಕಾರಣ ಮಾಡಲಿಲ್ಲ ಎಂದರು.

Edited By : Nagaraj Tulugeri
PublicNext

PublicNext

08/08/2021 02:00 pm

Cinque Terre

68 K

Cinque Terre

55

ಸಂಬಂಧಿತ ಸುದ್ದಿ