ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ದರ್ಜೆಯ ಸ್ಥಾನ ತಿರಸ್ಕರಿಸಿದ ಬಿಎಸ್​​ವೈ- ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಸ್ಥಾನಮಾನವನ್ನು ವಾಪಸ್​ ಪಡೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​​ವೈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Edited By : Vijay Kumar
PublicNext

PublicNext

08/08/2021 03:11 pm

Cinque Terre

32.46 K

Cinque Terre

8

ಸಂಬಂಧಿತ ಸುದ್ದಿ