ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಲ್ಮೀಕಿ ಸಮುದಾಯದ ಕಿವಿಗೆ ಹೂವಿಟ್ಟರು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಾಯಕರು ರಾಜ್ಯದ ನಾಲ್ಕನೇ ದೊಡ್ಡ ಸಮುದಾಯ. ರಾಜ್ಯ ಸಚಿವ ಸಂಪುಟದಲ್ಲಿ ಸಮುದಾಯದ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜನಸಂಖ್ಯೆ ಆಧಾರದಲ್ಲಿ ಇನ್ನೂ ಇಬ್ಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ 2020ರಲ್ಲಿ ನಡೆದ ಎರಡನೇ ವಾಲ್ಮೀಕಿ ಜಾತ್ರೆಯಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ಆಮರಣಾಂತ ಉಪವಾಸ ಮಾಡುವೆ ಎಂದು ಮೂರನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಎಚ್ಚರಿಸಿದ್ದೆ. ಆಗ ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆಯಿಡಿ ಎಂದರು. ಈಗ ಮಾಜಿ ಮುಖ್ಯಮಂತ್ರಿಗಳಾಗಿ ಮೊಮ್ಮಕ್ಕಳನ್ನು ಆಡಿಸುತ್ತಿದ್ದಾರೆ. ನಮ್ಮನ್ನು ಮತಬ್ಯಾಂಕ್ ಮಾಡಿಟ್ಟುಕೊಳ್ಳುತ್ತಿದ್ದಾರೆ ಎನ್ನುವುದನ್ನು ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಅಧಿಕಾರಕ್ಕೆ ಬಂದ ಮೇಲೆ ಸಮುದಾಯದ ಆಶೋತ್ತರಗಳನ್ನು ಮರೆಯುತ್ತಿದ್ದಾರೆ ಎಂದರು.
PublicNext
08/08/2021 08:18 pm