ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಗಾ ರ ಟ್ವೀಟರ್ ಖಾತೆ ಬ್ಲಾಕ್ ಮಾಡಬಹುದೇ ಹೊರತು, ಅವರ ಜನ ಪರ ಧ್ವನಿಯನ್ನಲ್ಲ…

ನವ ದೆಹಲಿ : ತಾತ್ಕಾಲಿಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಧಿಕೃತ ಟ್ವೀಟರ್ ಖಾತೆಯನ್ನು ಅಮಾನತು ಮಾಡಿದಕ್ಕಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಹಾಗು ಎನ್ ಎಸ್ ಯು ಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಇಂದು (ಸೋಮವಾರ, ಆಗಸ್ಟ್ 9) ದೇಶದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ನಮ್ಮ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು ಅಮಾನತುಗೊಳಿಸಿದ್ದರೂ ಕೂಡ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದೆ.

ದೆಹಲಿಯಲ್ಲಿ ಇತ್ತೀಚೆಗೆ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಪೋಷಕರನ್ನು ಭೇಟಿಯಾಗಿದ್ದರು, ಮತ್ತು ಅವರೊಂದಿಗಿನ ಫೋಟೋವನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದರು. ಪೋಷಕರ ಗುರುತನ್ನು ಬಹಿರಂಗಪಡಿಸುವ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು ಟ್ವಿಟರ್ ತೆಗೆದುಹಾಕಿದೆ.

ಟ್ವೀಟರ್ ತೆಗೆದುಕೊಂಡ ಈ ಕ್ರಮವನ್ನು ಕೇಂದ್ರ ಸರ್ಕಾರದ ಒತ್ತಡದಿಂದ ಇದನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಸದ್ಯ, ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆ ಜಾಲ್ತಿಯಲ್ಲಿದೆ.

Edited By : Nirmala Aralikatti
PublicNext

PublicNext

09/08/2021 11:50 am

Cinque Terre

48.84 K

Cinque Terre

1

ಸಂಬಂಧಿತ ಸುದ್ದಿ