ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್ ಶುರುವಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.
ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವರು ಯಾರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.
PublicNext
09/08/2021 02:58 pm