ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರನ್ನು ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಚಿದಂಬರಂ ಅವರು "ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯತಂತ್ರಗಳು ಮತ್ತು ಸಮನ್ವಯವನ್ನು ನೋಡಿಕೊಳ್ಳುತ್ತಾರೆ" ಎಂದು ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. 2017ರ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಕರಾವಳಿ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಕೆಲವು ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು.
PublicNext
09/08/2021 05:46 pm