ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿಗೊಳಿಸಿದ್ದಾರೆ.
ಇಡಿ ಅಧಿಕಾರಿಗಳು ಅವರು ಇತ್ತೀಚಿಗೆ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ವಶಪಡಿಸಿಕೊಂಡಿರುವ ದಾಖಲೆಗಳ ಸಂಬಂಧ ಮಾಹಿತಿ ನೀಡಿ ಅಗತ್ಯ ವಿವರಗಳನ್ನು 10 ದಿನಗಳೊಳಗೆ ಸಲ್ಲಿಸಿ ಸ್ಪಷ್ಟನೆ ನೀಡುವಂತೆ ಅಧಿಕಾರಿಗಳು ಜಮೀರ್ ಅಹ್ಮದ್ ಅವರಿಗೆ ನೋಟೀಸ್‌ನಲ್ಲಿ ಸೂಚಿಸಿದ್ದಾರೆ.
ಆಗಸ್ಟ್ 5ರಂದು ಜಮೀರ್ ಅಹ್ಮದ್ ಖಾನ್ ಅವರ ಕಂಟೋನ್ಮೆಟ್ ರೈಲು ನಿಲ್ದಾಣದ ಬಳಿಯ ಮನೆ ಕಚೇರಿ ಫ್ಲಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಕೆಲ ದಾಖಲೆಗಳಲ್ಲಿನ ಆಸ್ತಿ, ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈಡಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.
PublicNext
09/08/2021 10:27 pm