ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದ ಪ್ರೀತಂ

ಬೆಂಗಳೂರು: ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾಜಿ ಶಿಷ್ಯನಿಗೆ ದೆವೇಗೌಡರು ಆಶೀರ್ವಾದ ನೀಡಿದ್ದರು.ಇದಕ್ಕೆ ಬಿಜೆಪಿ ಶಾಸಕ ಪ್ರೀತಂ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಎಂ ಅವರ ಈ ನಡೆ ಸರಿಯಲ್ಲ ಕ್ಷೇತ್ರದಲ್ಲಿ ಕಾರ್ಯಕರ್ತರು ಕಷ್ಟ ಪಟ್ಟು ಪಕ್ಷ ಕಟ್ಟುತ್ತಿದ್ದಾರೆ. ಜೆಡಿಎಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಮೇಲ್ಪಟ್ಟದಲ್ಲಿ ಹೊಂದಾಣಿಕೆ ಸರಿಯಲ್ಲ ಎಂದಿದ್ದರು.

ಹೊಂದಾಣಿಕೆ ರಾಜಕಾರಣ ಮಾಡುವುದಾದರೆ ಹೇಳಿ ನಾವೇ ಇಲ್ಲಿ ಮಾಡಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ ಈ ವಿಚಾರವಾಗಿ ಪ್ರೀತಂ ಗೌಡ ಅವರು ನನ್ನ ಯುವ ಸ್ನೇಹಿತರು. ಅವರ ಬಳಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಪ್ರೀತಂ ಗೌಡ ಅವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪ್ರೀತಂ ಗೌಡ ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದಾರೆ.

Edited By : Nirmala Aralikatti
PublicNext

PublicNext

10/08/2021 05:17 pm

Cinque Terre

30.96 K

Cinque Terre

2

ಸಂಬಂಧಿತ ಸುದ್ದಿ