ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಬೊಮ್ಮಾಯಿ ಮೃದು ಸ್ವಭಾವದವರು. ಭಿನ್ನರಿಗೆ ಮೃದುವಾಗಿಯೇ ಉತ್ತರ ಕೊಡುತ್ತಾರೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಉದ್ದೇಶವೇ ಭಿನ್ನಮತೀಯರನ್ನು ಮಟ್ಟ ಹಾಕುವುದಕ್ಕೆ. ಬೊಮ್ಮಾಯಿ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಜೆಡಿಎಸ್‍ನವರು ನಿಮ್ಮ ಜೊತೆ ನಾವಿದ್ದೇವೆ ಎನ್ನುತ್ತಾರೆ. ಸಚಿವ ಸ್ಥಾನ, ಖಾತೆ ಹಂಚಿಕೆ ವಿರುದ್ಧ ಅಪಸ್ವರ ಎತ್ತುವವರು ಸಹ ಅವರನ್ನು ಏನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
PublicNext
10/08/2021 05:47 pm