ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಸಂವಿಧಾನಿಕ ಪದ ಬಳಸಿದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಿತರಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇದು ಬಿಜೆಪಿಯ ನೀಚ ಸಂಸ್ಕೃತಿ ಎಂದಿದ್ದಾರೆ.
ಕಾಂಗ್ರೆಸಿಗರ ವಿರುದ್ಧ ಸಚಿವ ಈಶ್ವರಪ್ಪ ಅವರ ಅವಾಚ್ಯದ ನುಡಿಗಳು ಭಾರತೀಯ ಜನತಾ ಪಕ್ಷದ ನೀಚ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವರ ಹೇಳಿಕೆಗೆ ಮುಖ್ಯಮಂತ್ರಿಗಳಿಂದ ಉತ್ತರ ಎದುರು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
'ಈಶ್ವರಪ್ಪ ಅವರ ಹೇಳಿಕೆ ಬಿಜೆಪಿ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಇಡೀ ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಗಮನಿಸುತ್ತಿದ್ದೇವೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಯಾರನ್ನೂ ದ್ವೇಷಿಸದೇ, ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ, ಅದಕ್ಕೆ ಬದ್ಧರಾಗಿರದೇ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಈ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸಿಗರು ಇನ್ನೂ ಬದುಕಿದ್ದಾರೆ. ಅವರ ಹೇಳಿಕೆಗೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ನೀಡುತ್ತಾನೆ ಎಂದು ತಿರುಗೇಟು ನೀಡಿದರು.
PublicNext
10/08/2021 10:47 pm