ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರು ತಮ್ಮ ಅಸಮಾಧಾನ, ನೋವನ್ನು ತೋಡಿಕೊಂಡಿದ್ದಾರೆ. ಅವರ ಜೊತೆ ನಾನು ಕೂಡ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ, ಬೆಂಗಳೂರಿಗೆ ಬಂದ ಮೇಲೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆನಂದ್ ಸಿಂಗ್ ನನಗೆ ಮೂರು ದಶಕಗಳ ಗೆಳೆಯ. ಅವರೊಂದಿಗೆ ನಿನ್ನೆ ಮಾತಾಡಿದ್ದೀನಿ. ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಜೊತೆ ಮಾತಾಡ್ತೀನಿ. ಅವರು ಯಾವಾಗಲಾದರೂ ಬಂದು ಭೇಟಿ ಮಾಡಲಿ. ಆನಂದ್ ಸಿಂಗ್ ಜೊತೆ ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
PublicNext
11/08/2021 11:29 am