ಬೆಳಗಾವಿ: ಬಿಜೆಪಿ ಜೆಡಿಎಸ್ ಜೊತೆಗೆ ಮೃದು ಧೋರಣೆ ತಳೆದಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, "ಏನ್ ಮಾಡೋಣ? ಕುಮಾರಸ್ವಾಮಿ ಕರ್ಕೊಂಡು ಬಂದು ಹೊಡೆಯೋಕೆ ಆಗುತ್ತದೆಯೇ? ರಾಜಕೀಯ ಪಕ್ಷವಾಗಿ ನಮ್ಮ ಕೆಲಸ ನಾವು ಅವರ ಕೆಲಸ ಅವರು ಮಾಡುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿಯ ಪ್ರಶ್ನೆಯೇ ಬರುವುದಿಲ್ಲ. ನಮ್ಮ ಸರ್ಕಾರ ಅಧಿಕಾರದ ಅವಧಿ ಪೂರೈಸುತ್ತದೆ" ಎಂದರು.
ಈ ಸರ್ಕಾರ ಪತನಗೊಳ್ಳುತ್ತದೆ ಎಂಬ ಕೆಟ್ಟ ಕನಸನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಾಣುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೇವಲ ಕೆಟ್ಟ ಕನಸುಗಳೇ ಬರುತ್ತಿವೆ. ಈ ಜನ್ಮದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಬರೆದಿಟ್ಟುಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.
PublicNext
11/08/2021 02:05 pm