ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈಶ್ವರಪ್ಪನವರಿಗೆ ಅರಳು ಮರಳು ಶೀಘ್ರ ಆಸ್ಪತ್ರೆಗೆ ಸೇರಿಸಿ : ಈಶ್ವರ್ ಖಂಡ್ರೆ

ಬೆಂಗಳೂರು : ಉನ್ನತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ನಿನ್ನೆ ಕಾಂಗ್ರೆಸ್ ನಾಯಕರ ವಿರುದ್ಧ ಅತ್ಯಂತ ಕೀಳುಮಟ್ಟದ ಪದ ಬಳಸಿ, ನಿಂದಿಸುವ ಮೂಲಕ ಅಕ್ಷಮ್ಯ ಅಪರಾಧ ಮಾಡಿದ್ದಾರೆ. 60 ರ ನಂತರ ಅವರಿಗೆ ಅರಳು - ಮರಳು ಇರಬಹುದು, ಕೂಡಲೇ ಅವರನ್ನು ಅಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಸಂವಿಧಾನದ ಮೇಲೆ ಪ್ರಮಾಣ ಮಾಡಿ ಪ್ರಮಾಣವಚನ ಸ್ವೀಕರಿಸಿ ಯಾವುದೇ ದ್ವೇಷ-ಅಸೂಯೆ ಇಲ್ಲದೇ, ನಿಷ್ಪಕ್ಷಪಾತ ಆಡಳಿತ ನೀಡುವುದಾಗಿ ಹೇಳಿದ್ದರು. ಈಗ ಪ್ರಚೋದನಕಾರಿ ಹೇಳಿಕೆ, ಅವಾಚ್ಯ ಪದ ಬಳಕೆಯ ಮೂಲಕ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಗರಂ ಆಗಿದ್ದಾರೆ. ಕೂಡಲೇ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

11/08/2021 06:33 pm

Cinque Terre

180.39 K

Cinque Terre

6

ಸಂಬಂಧಿತ ಸುದ್ದಿ