ಬೆಂಗಳೂರು: ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಬೆಲೆ ಸಿಗ್ತಿಲ್ಲ. ಎಂದು ವಿಧಾನಸೌಧದ ಎದುರು ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಧರಣಿ ಕುಳಿತಿದ್ದಾರೆ. "ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಯಾಕೋ ಬೆಲೆ ಸಿಗುತ್ತಿಲ್ಲ. ರಿಸರ್ವ್ ಕ್ಷೇತ್ರ ಎನ್ನುವ ಕಾರಣಕ್ಕೋ ಯಾಕೋ ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ ತರಹ ತಾರತಮ್ಯ ಮಾಡಬಾರದು" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಕಾಏಕಿ ಬುಧವಾರ ಕಂದಾಯ ಇಲಾಖೆ ಪಟ್ಟಿ ಮಾಡಿ ಮೂಡಿಗೆರೆ ಕ್ಷೇತ್ರವನ್ನು ಕೈ ಬಿಡಲಾಗಿದೆ. ಸಂಜೆಯವರೆಗೂ ನಾನು ಇಲ್ಲಿಯೇ ಕೂರುತ್ತೇನೆ. ಎನ್ ಡಿಆರ್ ಎಫ್ ಪಟ್ಟಿಯಲ್ಲಿ ಮೂಡಿಗೆರೆ ಸೇರಿಸಬೇಕು ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದರು.
ಆರ್. ಅಶೋಕ್ ಈ ತರಹ ಮಾಡಿದಾರೆ ಎಂದು ಅನಿಸುತ್ತಿಲ್ಲ. ಎಲ್ಲ ಉಸ್ತುವಾರಿ ಮಂತ್ರಿಗಳು ಬರುತ್ತಾರೆ, ಆದರೆ ಏನೂ ಮಾಡಲ್ಲ. ಇವರಿಗೆ ಬರಿ ಮಾತಲ್ಲಿ ಹೇಳಿದರೆ ಅರ್ಥವಾಗಲ್ಲ. ಅದಕ್ಕಾಗಿ ನಾನು ಇಲ್ಲಿಯೇ ಕೂತಿರುತ್ತೇನೆ ಎಂದರು. ನಾನು 2018ರಲ್ಲಿ ಶಾಸಕನಾದಾಗ ಕುಮಾರಸ್ವಾಮಿ ಸಿಎಂ ಆಗಿದ್ದರು. ಕುಮಾರಸ್ವಾಮಿ ಸಿಎಂ ಆದಾಗ ನಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಿತ್ತು. ಆದರೆ ನಮ್ಮದೇ ಸರ್ಕಾರ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಅಸಮಾಧಾನ ವ್ಯಕ್ತಪಡಿಸಿದರು.
PublicNext
12/08/2021 12:54 pm